ಉತ್ತರ ಕನ್ನಡ :ದೇಶದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಹೊಸ ನಿಯಮವನ್ನು ಜಾರಿ ತರಲು ನಿರ್ಧರಿಸಿದೆ. 

ಹಬ್ಬುತ್ತಿರುವ ಮಹಾಮಾರಿಯನ್ನು ತಡೆಯಲು ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವವರ ಬಳಿ ಕೋವಿಡ್ ನೆಗೆಟಿವ್ ರಿಪೋರ್ಟ್ ಇದ್ದರೆ ಮಾತ್ರ ಪ್ರವೇಶ ನೀಡುವುದಾಗಿ ಜಿಲ್ಲಾಡಳಿತ ಆದೇಶಿಸಿದೆ. ಈಗ ಗೋವಾ ಗಡಿಯಲ್ಲಿ ಕೋವಿಡ್ ತಪಾಸಣೆಗಾಗಿ ಸಿಬ್ಬಂದಿಗಳನ್ನು ನೇಮಿಸಲಾಗಿದೆ. 

ಪ್ರವಾಸಿಗರು ಕೋವಿಡ್ ರಿಪೋರ್ಟ್ ಹೊಂದಿರದಿದ್ದರೆ ಸ್ಥಳದಲ್ಲೇ ಪರೀಕ್ಷೆ ಮಾಡಲಾಗುತ್ತದೆ. ಮಹಾರಾಷ್ಟ್ರದಿಂದ ಬರುವ ಪ್ರವಾಸಿಗರ ಮೇಲೆ ಹೆಚ್ಚಿನ ಗಮನ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.