ರಾಜ್ಯದಲ್ಲಿ ಸಿಡಿ ಪ್ರಕರಣಕ್ಕೆ ದಿನೇ ದಿನೇ ಟ್ವಿಸ್ಟ್ ಪಡೆಯುತ್ತಿದೆ. ಇದೆಲ್ಲ ನನ್ನ ತಪ್ಪಲ್ಲ ಇದರ ಹಿಂದೆ ಡಿಕೆ ಶಿವಕುಮಾರ್ ಕೈವಾಡ ಇದೆ ಎಂದು ಆರೋಪಿಸಿದರು. ಇದಕ್ಕೆ ಕಾಂಗ್ರೆಸ್ ನ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. 

ಶಿವಮೊಗ್ಗದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್ ಸುಂದರೇಶ್ ಮಾತನಾಡಿ "ರಮೇಶ್ ಜಾರಕಿಹೊಳಿ ಅವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಅಲ್ಲದೆ ಅವರ ಬಳಿ ಯಾವುದೇ ಸಾಕ್ಷ್ಯಗಳಿಲ್ಲ. ಅಷ್ಟೇ ಅಲ್ಲದೇ ರಮೇಶ್ ಬೆಂಬಲಿಗರು ಡಿಕೆಶಿ ವಾಹನದ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಈ ಕೆಲಸ ಮಾಡಿದವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ,ಮುಖ್ಯಮಂತ್ರಿಗಳು ಜಿಲ್ಲೆಗೆ ಬಂದಾಗ ಘೇರಾವ್ ಹಾಕಲಾಗುವುದು "ಎಂದು ಹೇಳಿದರು. 

ರಮೇಶ್ ಜಾರಕಿಹೊಳಿ ಯುವತಿಯನ್ನು ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ. ಇಷ್ಟೆಲ್ಲಾ ಮಾಡಬಾರದ ಕೆಲಸ ಮಾಡಿ ಈಗ ಡಿಕೆ ಶಿವಕುಮಾರ್ ಮೇಲೆ ಆರೋಪ ಹೊರಿಸುತ್ತಿದ್ದಾರೆ. ಇವರ ಮಾತು ತೀರಾ ಅಸಹ್ಯಕರವಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಸಹ ಇನ್ನೂ ಬಂಧಿಸಿಲ್ಲ. ಇದೆಲ್ಲಾ ನೋಡಿದರೆ, ಗೃಹ ಸಚಿವರು ರಮೇಶ್ ಜಾರಕಿಹೊಳಿಗೆ ರಕ್ಷಣೆ ನೀಡುತ್ತಿದ್ದಾರೆ. ಎಂದು ದೂರಿದ್ದಾರೆ.