ಚಿಕ್ಕಮಗಳೂರು : ಪೊಲೀಸ್ ಇಲಾಖೆ ವತಿಯಿಂದ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲಾ ವರಿಷ್ಠಾಧಿಕಾರಿ ಅಕ್ಷಯ್ ಎಂ ಹೆಚ್ ಅವರು ಭಾಗವಹಿಸಿದ್ದರು.
ಕೊರೋನಾ ಲಾಕ್ ಡೌನ್ ವೇಳೆ ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳನ್ನು ಪೂರೈಕೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕಾರ ನೀಡಿದ್ದ ಹಾಗೂ ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದ ಹೆಗ್ಗಾರುಕುಡಿಗೆ ವಾಸಿ ಹೆಚ್ ಎಂ ಅಬೂಬುಕರ್ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು ಇದೇ ವೇಳೆ 124 ಜನರಿಗೆ ಇಂದು ಮುಖ್ಯ ಮಂತ್ರಿ ಪದಕ ವಿತರಣೆ ಮಾಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಸೇರಿದಂತೆ ಅನೇಕ ಪೊಲೀಸ್ ಅಧಿಕಾರಿಗಳು, ಪೇದಗಳು ರಕ್ತದಾನ ಮಾಡಿದರು.




0 Comments