ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಸ್ಫೋಟಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 10 ಜಿಲ್ಲೆಗಳಲ್ಲಿ ಮುಂಬರುವ ಆದೇಶದವರೆಗೆ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ' ಹಳ್ಳಿಗಳಿಗೆ ಭೇಟಿ ಮತ್ತು ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿತ್ತು.
ಈಗ ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ ವ್ಯಾಪಕವಾಗಿ ಹೆಚ್ಚಳವಾಗುತ್ತಿದೆ.ಸಾರ್ವಜನಿಕರು ಗುಂಪುಗಟ್ಟಿ ನಿಲ್ಲುವುದನ್ನು ತಡೆಗಟ್ಟಲು, ಸೋಂಕು ಹೊರಡುವುದನ್ನು ನಿಯಂತ್ರಿಸುವ ಸಲುವಾಗಿ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ' ಹಳ್ಳಿಗಳಿಗೆ ಭೇಟಿ ಹಾಗೂ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸ್ಥಗಿತಗೊಳಿಸಲು ಸರ್ಕಾರದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಇದೇ ತಿಂಗಳ ದಿನಾಂಕ 17ರಂದು ಶೃಂಗೇರಿ ತಾಲೂಕಿನ ಕಿಗ್ಗಾದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಇಡಲಾಗಿತ್ತು.ಈಗ ಮುಂದಿನ ಆದೇಶ ಬರುವವರೆಗೂ ಕಾರ್ಯಕ್ರಮಕ್ಕೆ ತಡೆಬಿದ್ದಿದೆ.



0 Comments