ಮೆಣಸೆ ; ತಾಲ್ಲೂಕಿನ ಮೆಣಸೆ ಗ್ರಾಮ ಪಂಚಾಯ್ತಿಯಲ್ಲಿ ಕೊರೋನಾ ಜಾಗೃತಿ ಜಾಥಾ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು. ಗ್ರಾಮ ಪಂಚಾಯಿತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು, ಪಿಡಿಒ ಹಾಗೂ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಜಾಥಾದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಸಿಬ್ಬಂದಿ ಮಾತನಾಡಿ " ಜನರು ತಮಗೆ ಎಲ್ಲಿ ಕೊರೋನಾ ಒಕ್ಕರಿಸುತ್ತದೆ ಎಂದು ಹೆದರುವ ಅಗತ್ಯವಿಲ್ಲ. 45 ವರ್ಷ ಮೇಲ್ಪಟ್ಟವರಿಗೆಲ್ಲ ಉಚಿತವಾಗಿ ಲಸಿಕೆ ನೀಡುವ ವ್ಯವಸ್ಥೆ ಲಭ್ಯವಿದೆ. ಇದಕ್ಕೆ ನೀವು ನಿಮ್ಮ ಆಧಾರ್ ಕಾರ್ಡ್ ನೀಡಿ ಲಸಿಕೆಯನ್ನು ಯಾವುದೇ ಭಯವಿಲ್ಲದೇ ಸ್ವೀಕರಿಸಬಹುದು. ಒಂದು ವೇಳೆ ಯಾರಾದರೂ 45 ವರ್ಷ ಮೇಲ್ಪಟ್ಟೂ ಅಸ್ತಮಾ ಅಥವಾ ಉಸಿರಾಟದ ಸಮಸ್ಯೆ ಇದ್ದರೆ ವೈದ್ಯರು ನೀಡುವ ಸಲಹೆಯ ಪ್ರಕಾರ ಚಿಕಿತ್ಸೆ ಪಡೆದುಕೊಳ್ಳಬಹುದು ಮೆಣಸೆಯಲ್ಲಿ ಸದ್ಯ ಒಂಭತ್ತು ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ  ಹಾಗೂ ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ"ಎಂದು ಮಾಹಿತಿ ನೀಡಿದರು.