ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿರುವ ಸುಳಿವಿನ ಮೇಲೆ ಪೊಲೀಸರು ದಾಳಿ ನಡೆಸಿ ಆರು ಜನ ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಪೊಲೀಸ್ ಇನ್ಸ್ಪೆಕ್ಟರ್ ರಕ್ಷಿತ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಕ್ರಮವಾಗಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರನ್ನು ಬಂಧಿಸಿದ್ದಾರೆ. ಶರವಣ, ನಯಾಝ್, ಹೇಮಂತ್ ಕುಮಾರ್, ದಿಲೀಪ್, ಝಾಕೀರ್, ನರ್ಝನ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 50,530 ರೂ ನಗದು ಹಾಗು 6 ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಸಧ್ಯ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.



0 Comments