ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರದ ಪರ್ವ ಶುರುವಾಗಿದೆ. ಜೆಡಿಎಸ್ ನ ಮಧು ಬಂಗಾರಪ್ಪ ಅವರು ತಮ್ಮ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ನೂತನವಾಗಿ ಸೇರ್ಪಡೆಗೊಳ್ಳಲಿದ್ದಾರೆ. ನಂತರ ಶಿವಮೊಗ್ಗದ ಜೆಡಿಎಸ್ ಕಾರ್ಯಕರ್ತರು ಮಧು ಬಂಗಾರಪ್ಪ ಅವರಿಗೆ ಬೆಂಬಲ ಸೂಚಿಸಿ ತಾವೂ ಸಹ ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ತಿಳಿಸಿದ್ದಾರೆ.
ಇದರ ಬೆನ್ನಲ್ಲೇ ಶಿವಮೊಗ್ಗದ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಮಂಜುನಾಥ್ ಅವರು ಬುಧವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಳಗಾವಿಯ ಕಾಂಗ್ರೆಸ್ ಕಛೇರಿಯಲ್ಲಿ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಮಂಜುನಾಥ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಲು ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್ ಅವರು ವಿರೋಧ ವ್ಯಕ್ತಪಡಿಸಿದ್ದರು.ವಿರೋಧದ ನಡುವೆಯೂ ಸಹ ಡಿಕೆ ಶಿವಕುಮಾರ್ ಅವರು ತಮ್ಮ ನೇತೃತ್ವದಲ್ಲೇ ಮಂಜುನಾಥ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವುದು ಕುತೂಹಲಕಾರಿಯಾಗಿದೆ.


0 Comments