ಚಿಕ್ಕಮಗಳೂರು :ಚಿಕ್ಕಮಗಳೂರು ನಗರದಲ್ಲಿ ವಾಸವಿರುವ, ಹಿಂದೂ ಸಂಘಟನೆಯ ಕಾರ್ಯಕರ್ತರಾಗಿದ್ದ ಮನೋಜ್ ಅವರ ಮೇಲೆ ಬುಧವಾರ ತಡರಾತ್ರಿ ಅಪರಿಚಿತ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮನೋಜ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಸಂಜೆ ಸುಮಾರಿಗೆ ಮನೋಜ್ ಮೃತಪಟ್ಟಿದ್ದಾರೆ. ಈ ಕೃತ್ಯಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪೋಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿ ಇಂದು ಹಿಂದೂ ಪರ ಕಾರ್ಯಕರ್ತರು ಹನುಮಂತಪ್ಪ ವೃತ್ತದ ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ‌