ಕೊಪ್ಪ : ಜೀವಜಲ ನೀರು ಅತ್ಯಮೂಲ್ಯವಾದದ್ದು,.ಅದರ ಮಿತಬಳಕೆ ಮತ್ತು ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ. ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ. ಡಿ ರಾಜೇಗೌಡ ಅವರು ಹೇಳಿದರು.
ಕೊಪ್ಪ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಸೋಮುವಾರ ನಡೆದ ಕುಡಿಯುವ ನೀರಿನ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂತರ್ಜಲ ಸಂರಕ್ಷಣೆ ಮತ್ತು ನೀರಿನ ಮಿತ ಬಳಕೆದಾರರಿಗೆ ಸೂಕ್ತವಾದ ಮಾಹಿತಿ ನೀಡಿಲು ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಸಭೆ ನಡೆಸಲು ಅಧಿಕಾರಿಗಳು ಮುಂದಾಗಬೇಕು ಎಂದು ಸೂಚಿಸಿದರು. ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಜನರಿಗೆ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಕುಡಿಯುವ ನೀರು ಒದಗಿಸಲು ತುರ್ತು ಅಗತ್ಯಕ್ಕೆ ಬೇಕಾಗುವಷ್ಟು ಒಟ್ಟು 15 ಲಕ್ಷ ಅನುದಾನ ಲಭ್ಯವಿದೆ. ಅದನ್ನು ಕುಡಿಯುವ ನೀರಿನ ಅವಶ್ಯಕ ಕಾಮಗಾರಿಯಾದ ಪೈಪ್ ಲೈನ್, ಮೋಟಾರು ಅಳವಡಿಕೆ ಹಾಗೂ ಇನ್ನಿತರೇ ಕ್ರಮ ಕೈಗೊಳ್ಳುವ ಮೂಲಕ ಕುಡಿಯುವ ನೀರಿಗೆ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು


0 Comments