ಶಿವಮೊಗ್ಗ ;ದಿಢೀರನೆ ರಸಗೊಬ್ಬರದ ಬೆಲೆ ಏರಿಕೆ ಮಾಡಿರುವುದು ರೈತ ವಲಯಕ್ಕೆ ಬರಸಿಡಿಲು ಬಡಿದಂತಾಗಿದೆ. ಕೇಂದ್ರ ಸರ್ಕಾರದ ಈ ನಡೆಯನ್ನು ತೀವ್ರವಾಗಿ ಖಂಡಿಸುವುದಾಗಿ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಕೇಂದ್ರದ ಬಿಜೆಪಿ ಸರ್ಕಾರ ಹೀಗೆ ಏಕಾಏಕಿ ಬೆಲೆ ಏರಿಸಿ ರೈತರು ಹಾಗೂ ಜನಸಾಮಾನ್ಯರ ಭರವಸೆ ಕಳೆದುಕೊಂಡಿದ್ದಾರೆ. ಈಗಾಗಲೇ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಈ ನಡುವೆ ರೈತರಿಗೆ ರಸಗೊಬ್ಬರದ ಬೆಲೆ ಏರಿಕೆ ಮಾಡಿ ಗಾಯದ ಮೇಲೆ ಬರೆ ಎಳೆಯಲಾಗಿದೆ. ಹೆಚ್ಚು ರೈತಪರ ಯೋಜನೆಗಳು ಹಾಗೂ ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನೀಡದಿದ್ದಲ್ಲಿ ರೈತರು ಬಡತನದಲ್ಲೇ ಇರಬೇಕಾಗುತ್ತದೆ ಎಂದು ಹೇಳಿದರು.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ತಯಾರಿಕೆಗೆ ಉಪಯೋಗಿಸುವ ಕಚ್ಚಾ ವಸ್ತುವಿನ ಬೆಲೆ ಏರಿಕೆ ಕಂಡಿದ್ದರಿಂದ ರಸಗೊಬ್ಬರ ಬೆಲೆ ಏರಿಕೆ ಆಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ, ಆದರೆ ಹಳೆಯ ದಾಸ್ತಾನಿಗೂ ಬೆಲೆ ಏರಿಕೆ ಮಾಡಿರುವುದು ರೈತರ ವಿರೋಧಕ್ಕೆ ಕಾರಣವಾಗಿದೆ.


0 Comments