ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ಮಲೆನಾಡು ಭಾಗದಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳಯಾಗುವ ಸಾಧ್ಯತೆ ಇದ್ದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ಎಚ್ಚರಿಕೆ ಸಂದೇಶ ಹೊರಡಿಸಿದೆ.
ದಿನಾಂಕ 12 ಮೇ ಇಂದ 15ಮೇ ವರೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮ ವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಡಳಿತದ ವತಿಯಿಂದ ಕೆಲವು ಸೂಚನೆ ಹಾಗೂ ಎಚ್ಚರಿಕೆ ಸಂದೇಶಗಳನ್ನು ನೀಡಲಾಗಿದೆ.
- ಸಾರ್ವಜನಿಕರು ತಗ್ಗು ಪ್ರದೇಶ ಹಾಗೂ ನದಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು
- ಅಪಾಯಕಾರಿ ವಿದ್ಯುತ್ ಕಂಬಗಳು/ಕಟ್ಟಡ ಹಾಗೂ ಮರಗಳ ಬಳಿ/ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳಲ್ಲಿ ಇರುವುದು
- ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳುವುದು.


0 Comments