ಚಿಕ್ಕಮಗಳೂರು : ನಿಮಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ ಅಗತ್ಯ ಪ್ರಮಾಣದ ಔಷಧ, ಆಕ್ಸಿಜನ್ ಹಾಗೂ ವೈದ್ಯಕೀಯ ಉಪಕರಣಗಳನ್ನು ಜಿಲ್ಲೆಗೆ ಪೂರೈಸಿ ಎಂದು ಕೋವಿಡ್ ಕುರಿತು ಏರ್ಪಡಿಸಿದ್ದ ವರ್ಚುವಲ್ ಮೀಟಿಂಗ್ ನಲ್ಲಿ ಶೃಂಗೇರಿ ಕ್ಷೇತ್ರದ ಶಾಸಕ ಟಿ. ಡಿ ರಾಜೇಗೌಡ ವಿನಂತಿಸಿದ್ದಾರೆ.
ಜಿಲ್ಲಾ ನೂತನ ಉಸ್ತುವಾರಿ ಸಚಿವರಾದ ಅಂಗಾರ ಅವರ ಆಧ್ಯಕ್ಷತೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ಏರ್ಪಡಿಸಿದ್ದ ಕೋವಿಡ್ ಚಿಕಿತ್ಸೆ ಹಾಗೂ ಮುಂಜಾಗ್ರತೆ/ನಿಯಂತ್ರಣ ಕುರಿತ ಸಭೆಯಲ್ಲಿ ಶಾಸಕ ಟಿ.ಡಿ ರಾಜೇಗೌಡ ಪ್ರಸ್ತುತ ಜಿಲ್ಲೆಯ ಕೋವಿಡ್ ಕುರಿತ ಬೆಳವಣಿಗೆಗಳ ಬಗ್ಗೆ ವಿವರಿಸಿ, ಕೊಪ್ಪ, ಶೃಂಗೇರಿ ಹಾಗೂ ಎನ್ ಆರ್ ಪುರ ಭಾಗಗಳಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ವ್ಯಾಕ್ಸಿನ್ ಕೊರತೆ ಎದ್ದು ಕಾಣುತ್ತಿದೆ. ಆಕ್ಸಿಜನ್, ವ್ಯಾಕ್ಸಿನ್ ಸೇರಿದಂತೆ ಅಗತ್ಯ ವೈದ್ಯಕೀಯ ಉಪಕರಣಗಳನ್ನು ತಡ ಮಾಡದೆ ಕೂಡಲೇ ಪೂರೈಸುವಂತೆ ಮನವಿ ಮಾಡಿಕೊಂಡರು.
ಹಾಗೆಯೇ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಸಹ ಇದ್ದು ಪರಿಹರಿಸುವಂತೆ ಕೇಳಿಕೊಂಡರು. ಈ ಬಾರಿ ಕೊರೋನಾ ನಿಯಂತ್ರಣದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರೆಡೂ ಎಡವಿದೆ ಎಂದು ಆರೋಪಿಸಿದರು.



0 Comments