ಸುಳ್ಯದ ಶಾಸಕ ಹಾಗೂ ರಾಜ್ಯ ಮೀನುಗಾರಿಕೆ ಹಾಗೂ ಬಂದರು ಸಚಿವರಾಗಿ ಕಾರ್ಯ ನಿರ್ವಹಿಸುತ್ತಿರುವ ಎಸ್. ಅಂಗಾರ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಮುಂದಿನ ಆದೇಶದ ವರೆಗೂ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಹಿಂದೆ ಸಿ.ಟಿ ರವಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು, ನಂತರ ಪಕ್ಷದ ವತಿಯಿಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಿದ ನಂತರ ಒಂದು ಪಕ್ಷ ಒಂದು ಹುದ್ದೆ ಎಂಬ ದ್ಯೇಯೋದ್ಧೇಶದಡಿಯಲ್ಲಿ ತಮ್ಮ ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಆ ನಂತರ ಆ ಸ್ಥಾನಕ್ಕೆ ಯಾರನ್ನೂ ನೇಮಕ ಮಾಡಿರಲಿಲ್ಲ. ಕೊರೋನಾ ಅಬ್ಬರದ ಸಂಧರ್ಭದಲ್ಲಿ ಜಿಲ್ಲೆಗೆ ಉಸ್ತುವಾರಿ ಸಚಿವರು ಇಲ್ಲದಿರುವುದು ಸಾಕಷ್ಟು ಟೀಕೆಗೆ ಒಳಗಾಗಿತ್ತು.




0 Comments