ರಾಜ್ಯದ್ಯಂತ 14 ದಿನದ ಲಾಕ್ ಡೌನ್ ಜಾರಿಯಲ್ಲಿದ್ದು ಪಾಸಿಟಿವ್ ಕೇಸುಗಳು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡುಬರುತ್ತಿರುವುದು ಎಲ್ಲರ ಚಿಂತೆಗೀಡು ಮಾಡಿತ್ತು. ಆದರೆ ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಕೇಸುಗಳು ಇಳಿಕೆ ಕಂಡುಬಂದಿದ್ದು ಕಾಫಿ ನಾಡು ಜನ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ 4 ಸಾವು ಸಂಭವಿಸಿದ್ದಲ್ಲದೆ ಒಟ್ಟು 500 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಒಟ್ಟ 166 ಕೇಸ್ ಗಳು ಪತ್ತೆಯಾಗಿದ್ದು, 2 ಸಾವು ಸಂಭವಿಸಿದೆ. ಇಂದು ಒಟ್ಟು 228 ರೋಗಿಗಳು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ.
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು 44
- ಶೃಂಗೇರಿ 6
- ಮೂಡಿಗೆರೆ 26
www.newsmalnad.com
- ಕೊಪ್ಪ 9
- ಎನ್ ಆರ್ ಪುರ 10
- ತರೀಕೆರೆ 41
- ಕಡೂರು 30
ಹೀಗೆ ಒಟ್ಟು 166 ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ.
18ವರ್ಷ ಮೇಲ್ಪಟ್ಟವರು www.cowin.gov.in ಹಾಗೂ ಆರೋಗ್ಯ ಸೇತು, ಉಮಂಗ್ ಆಪ್ ನ ಮೂಲಕ ರಿಜಿಸ್ಟರ್ ಮಾಡಿಕೊಂಡು ವ್ಯಾಕ್ಸಿನ್ ತೆಗೆದುಕೊಳ್ಳೀ. ಅದಕ್ಕೂ ಮೊದಲು ರಕ್ತದಾನ ಮಾಡುವುದನ್ನು ಮರೆಯಬೇಡಿ. ಭಯ ಬೇಡ ಎಚ್ಚರಿಕೆ ಇರಲಿ


0 Comments