ಫ್ರಂಟ್ ಲೈನ್ ಕಾರ್ಯಕರ್ತರಿಗೆ ಪ್ಯಾಕೇಜ್ ನೀಡಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ

ಆಶಾ ಕಾರ್ಯಕರ್ತೆಯರು ,ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತಿ ಸಿಬ್ಬಂದಿಗಳು, ದೇವಸ್ಥಾನದ ಪುರೋಹಿತರು ಹಾಗೂ ಅನುದಾನರಹಿತ ಶಾಲೆಗಳ ಶಿಕ್ಷಕರಿಗೆ ಸರಕಾರ ಸೂಕ್ತ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಿ.ಎನ್ ಜೀವರಾಜ್ ರವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಪಿ ಕುಮಾರಸ್ವಾಮಿ, ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಉಪಸ್ಥಿತರಿದ್ದರು.