ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಖಾಸಗಿ ಆಸ್ಪತ್ರೆ ವೈದ್ಯರಾದ ಡಾ. ದೀಪಕ್ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ವೈದ್ಯರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಾ.ದೀಪಕ್ ಕ್ಲಿನಿಕ್ ನಿಂದ ಮನೆಗೆ ತೆರಳುತ್ತಿದ್ದರು, ಆಗ ಅವರ ಮೇಲೆ ಪೋಲಿಸ್ ಠಾಣೆ ಮತ್ತು ಅಗ್ನಿಶಾಮಕ ದಳದ ಕಚೇರಿ ಸಮೀಪವೇ ದಾಳಿ ಮಾಡಿದ ದುಷ್ಕರ್ಮಿಗಳು ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅವರನ್ನು ಸ್ಥಳೀಯರು ರಕ್ಷಿಸಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ತರೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.


0 Comments