ಕೊರೊನಾ ಎರಡನೇ ಅಲೆ ತಡೆಗಟ್ಟಲು ಜಿಲ್ಲಾಡಳಿತ ಹಲವು ಬಗೆಯ ಕಾನೂನು ಕ್ರಮಗಳನ್ನು ಕೈಗೊಂಡಿದೆ. ಆದರೆ ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದ ಸುಂಕದಕಟ್ಟೆಯ ಮಕ್ಕ ಮಸೀದಿಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ 7 ಜನ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.
ಸುಂಕದಕಟ್ಟೆಯ ಮಕ್ಕ ಮಸೀದಿಯ ಒಳಾಂಗಣದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿರಾಜಪೇಟೆ ತಾಲೂಕು ತಹಶೀಲ್ದಾರ್ ಆದಂತಹ ಯೋಗಾನಂದ ಅವರು ಕಳೆದ ರಾತ್ರಿ ದಿಢೀರ್ ದಾಳಿ ನಡೆಸಿದಾಗ ಸ್ಥಳದಲ್ಲಿ ಸುಮಾರು 7 ಜನ ಸಾಮೂಹಿಕ ಪ್ರಾರ್ಥನೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ.
ಮಸೀದಿಯ ಹೊರಭಾಗದಲ್ಲಿ ಕೋವಿಡ್-19 ನಿಯಮ ಪಾಲಿಸಲು ಮಸೀದಿಯನ್ನು ಮುಚ್ಚಲಾಗಿದೆ ಎಂಬ ನಾಮಫಲಕವನ್ನು ಅಳವಡಿಸಿ, ಒಳಗೆ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದರು. ಅಷ್ಟೇ ಅಲ್ಲದೇ ಪ್ರಾರ್ಥನೆ ಮಾಡುವ ಸಂದರ್ಭದಲ್ಲಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನು ಸಹ ಕಾಪಾಡದೇ ನಮಾಜ್ ಮಾಡುತ್ತಿದ್ದರು. ಸಧ್ಯ ಏಳು ಜನರ ವಿರುದ್ಧ ವಿರಾಜಪೇಟೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 Comments