ಶೃಂಗೇರಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಬಂದಿರುವ ಅಡ್ವಾನ್ಸ್ ಲೈಫ್ ಸಪೋರ್ಟ್ ಆಂಬುಲೆನ್ಸ್ ನ್ನು ಶಾಸಕರಾದ ಶ್ರೀ ಟಿ.ಡಿ. ರಾಜೇಗೌಡ ಅವರು ಉದ್ಘಾಟನೆ ಮಾಡಿದರು.
ಶೃಂಗೇರಿ ತಾಲ್ಲೂಕು ಆಸ್ಪತ್ರೆಗೆ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಆಂಬುಲೆನ್ಸ್ ಬಂದಿದ್ದು ಈ ಆಂಬುಲೆನ್ಸ್ ನಲ್ಲಿ ವೆಂಟಿಲೇಟರ್, ಆಕ್ಸಿಜನ್ ಮೀಟರ್, ಸಿಲಿಂಡರ್ ಸಹಿತ ಹಲವು ವಿಶೇಷ ಸೌಲಭ್ಯಗಳು ಇದ್ದು ಶೃಂಗೇರಿ ಜನತೆಗೆ ಇದರಿಂದ ಸಾಕಷ್ಟು ಉಪಯೋಗವಾಗಲಿದೆ.
ಕೊರೋನಾ ಸಂದರ್ಭದಲ್ಲಿ ಶೃಂಗೇರಿ ಯಲ್ಲಿಯೂ ಸಾಕಷ್ಟು ಪಾಸಿಟಿವ್ ಕೇಸ್ ಗಳು ಇದ್ದು, ತುರ್ತು ಸಂದರ್ಭದಲ್ಲಿ ಜನರಿಗೆ ಸೇವೆ ಒದಗಿಸಲು ಆಂಬ್ಯುಲೆನ್ಸ್ ನಲ್ಲಿಯೇ ಅಡ್ವಾನ್ಸ್ ಟೆಕ್ನಾಲಜಿ ಇದ್ದು ಇದರಿಂದ ಸಾಕಷ್ಟು ಅನುಕೂಲ ಆಗಲಿದೆ. ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕರಾದ ಟಿ.ಡಿ ರಾಜೇಗೌಡರು, ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಜಯಶೀಲ ಚಂದ್ರಶೇಖರ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರಫುಲ್ಲ ರಾಘವೇಂದ್ರ, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ್, ತಾಲೂಕು ಸರ್ಜನ್ ಡಾ. ದಯಾನಂದ್, ಹಾಗೂ ಶೃಂಗೇರಿ ವೃತ್ತ ನಿರೀಕ್ಷಕರಾದ ರವಿ ಬಿ. ಎಸ್ ಇದ್ದರು.
ಈ ಅಡ್ವಾನ್ಸ್ ಲೈಫ್ ಸಪೋರ್ಟ್ ಆಂಬುಲೆನ್ಸ್ ನಲ್ಲಿ ಈ ಕೆಳಕಂಡ ವಿಶೇಷ ಸೌಲಭ್ಯಗಳಿದ್ದು ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಸದುಪಯೋಗ ಮಾಡಿಕೊಳ್ಳಬಹುದಾಗಿದೆ.




0 Comments