ಚಿಕ್ಕಮಗಳೂರು ಜಿಲ್ಲೆಗೆ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನವಾಗಿದ್ದು, ಆರೋಪಿಗಳಿಂದ ಅರ್ಧ ಕೆ.ಜಿ.ಗಾಂಜಾ ಮತ್ತು ಬೈಕ್ ವಶಪಡಿಸಿಕೊಳ್ಳಲಾಗಿದೆ.

ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಬಣಕಲ್ ಪೊಲೀಸರು ಬಂಧಿಸಿದ್ದು ಆರೋಪಿಗಳಾದ ರಾಹುಲ್(17ವರ್ಷ) ಬ್ಯಾಗದ ಹಳ್ಳಿ, ಚಿಕ್ಕಮಗಳೂರು ಹಾಗೂ ಇಮ್ರಾನ್ ಖಾನ್(32 ವರ್ಷ), ಗೌರಿ ಕಾಲುವೆ ಈ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ

ಉಜಿರೆಯಿಂದ ಚಿಕ್ಕಮಗಳೂರು ತೆಗೆದುಕೊಂಡು ಬರುತ್ತಿದ್ದ ವೇಳೆ ಖಚಿತ ಮಾಹಿತಿಯ ಮೇರೆಗೆ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ