ಚಿಕ್ಕಮಗಳೂರಿನ ಮಸಗಲಿಯಲ್ಲಿ ಸುಮಾರು 4 ಎಕರೆ ಜಾಗದಲ್ಲಿ ಫಸಲಿಗೆ ಬಂದಿದ್ದೆ ಕಾಫಿ ಗಿಡಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಡಿದು ಹಾಕಿದ್ದಾರೆ.  

ಸುಪ್ರೀಂ ಕೋರ್ಟಿನ ಆದೇಶದಂತೆ ಅರಣ್ಯ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಗಿಡಗಳನ್ನು ಇಲಾಖೆಯ ಸಿಬ್ಬಂದಿಗಳು ತೆರವು ಗೊಳಿಸಿದ್ದಾರೆ. ಈ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೂ ಕಡಿದ ಗಿಡಗಳನ್ನು ಜಿಲ್ಲಾಧಿಕಾರಿಗಳ ಕಛೇರಿಯ ಮುಂಬಾಗದಲ್ಲಿ ತಂದು ಹಾಕಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು. 

ಅಲ್ಲಿನ 211 ಕುಟುಂಬಗಳಲ್ಲಿ ಕೇವಲ 76 ಕುಟುಂಬಗಳಿಗೆ ಮಾತ್ರ ಪರಿಹಾರ ದೊರಕಿದ್ದು ಉಳಿದ 135 ಕುಟುಂಬಗಳಿಗೆ ಯಾವುದೇ ಪರಿಹಾರ ದೊರಕಿಲ್ಲ  ಎಂದು ಅಲ್ಲಿನ ಜನರು ಆರೋಪಿಸಿದ್ದಾರೆ. ಜಿಲ್ಲಾಧಿಕಾರಿಗಳು ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಲು ಸಾರ್ವಜನಿಕರು ಆಗ್ರಹಿಸಿದ್ದಾರೆ.