ಶೃಂಗೇರಿ : ತಾಲೂಕು ಪಂಚಾಯ್ತಿಯಲ್ಲಿ ಇಂದು ನಡೆದ ಪ್ರಕೃತಿ ವಿಕೋಪದ ಸಭೆಯಲ್ಲಿ ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ.ಡಿ ರಾಜೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್, ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ಉಪಸ್ಥಿತರಿದ್ದರು.

ಹಲವಾರು ಅಹವಾಲುಗಳಿಗೆ ಪ್ರತಿಕ್ರಿಯಿಸಿದ ಜನಪ್ರತಿನಿಧಿಗಳು ಮುಖ್ಯವಾಗಿ ಈಗಿನ ಪ್ರಸ್ತುತ ಸನ್ನಿವೇಶದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಮುಖ್ಯವಾಗಿ ಬೇಕಾದ ನೆಟ್ವರ್ಕ್  ಹಾಗೂ ವಿದ್ಯುತ್ ಸಮಸ್ಯೆ ಕುರಿತು ಯಾವುದೇ ಸಮಸ್ಯೆಗಳು ಉಂಟಾಗದಂತೆ ಹಾಗೂ ಅದಕ್ಕೆ ಅಡೆ ತಡೆ ಆಗಿರುವ ಅರಣ್ಯ ಇಲಾಖೆಯ ಹಲವು ನಿಯಮಗಳನ್ನು ಸಡಿಲಗೊಳಿಸಿ ಶೀಘ್ರವಾಗಿ ಆ ಸಮಸ್ಯೆಯನ್ನು  ಬಗೆಹರಿಸುವಂತೆ ಅರಣ್ಯಾಧಿಕಾರಿಗಳಿಗೆ ಆದೇಶಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳು ಪೆಟ್ರೋಲ್ ಬೆಲೆ ಏರಿಕೆ ಹಾಗೂ ಶೃಂಗೇರಿಯ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಕುರಿತು ಪ್ರಶ್ನೆ ಕೇಳುತ್ತಿರುವಾಗಲೇ ಇದ್ಯಾವುದಕ್ಕೂ ಪ್ರತಿಕ್ರಿಯಿಸದೇ ಸಂಸದೆ ಶೋಭಾ ಕರಂದ್ಲಾಜೆ ತೆರಳಿದ್ದಾರೆ.

ಕೋವಿಡ್ ಸಂಕಷ್ಟದಲ್ಲಿ ಕ್ಷೇತ್ರಕ್ಕೆ ಬಾರದ ಸಂಸದೆ, ಜನರಿಂದ ಆಕ್ರೋಶ

ಕಾಫಿನಾಡು ಚಿಕ್ಕಮಗಳೂರು ಕೊವಿಡ್ ಎರಡನೇ ಅಲೆಯಲ್ಲಿ ಸಂಪೂರ್ಣ ತತ್ತರಿಸಿ ಹೋಗಿದೆ, ಇಡೀ ರಾಜ್ಯದಲ್ಲಿ ಅತ್ಯಂತ ಹೆಚ್ಚು ಪಾಸಿಟಿವಿಟಿ ಇರುವ ಜಿಲ್ಲೆಗಳ ಪೈಕಿ ಚಿಕ್ಕಮಗಳೂರು ಒಂದನೇ ಸ್ಥಾನಕ್ಕೆ ಬಂದಾಗಲೂ, ಅನೇಕ ಸಂಘ ಸಂಸ್ಥೆಗಳು ಆಹಾರ ಕಿಟ್ ನೀಡಿದ್ದರೂ ಸಂಸದರೂ ಮಾತ್ರ ಜನರ ಕಷ್ಟಕ್ಕೆ ಸ್ಪಂದಿಸುವುದಿರಲಿ ಜಿಲ್ಲೆಯ ಹಲವು ಭಾಗಕ್ಕೆ ತಲೆ ಹಾಕಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸಾಮಾಜಿಕ ಜಾಲತಾಣಲ್ಲಿ ಟ್ರೋಲ್:

ಕೊರೋನಾ ಎರಡನೇ ಅಲೆಯಲ್ಲಿ ಸಂಸದರಾದ ಶೋಭಾ ಕರಂದ್ಲಾಜೆ ಅವರು ತಮ್ಮ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಅತಿಥಿಯಾಗಿ ಆಗಾಗ ಕಾಣಿಸಿಕೊಳ್ಳುತ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲೂ ಟ್ರೋಲ್ ಗಳು ಎದುರಾಗುತ್ತಿವೆ.

ಕೊರೋನಾ ಎರಡನೇ ಅಲೆಯಲ್ಲಿ ಸಂಸದರಾದ ಶೋಭಾ ಕರಂದ್ಲಾಜೆ ಅವರು ತಮ್ಮ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಅಥಿತಿಯಾಗಿ ಆಗಾಗ ಕಾಣಿಸಿಕೊಳ್ಳುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗಳು ಎದುರಾಗಿವೆ.