ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಹಸಿರು ಶಾಲು ಹಾಕಿಕೊಂಡಿದ್ದಕ್ಕೆ ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಕದ ರಾಜ್ಯಕ್ಕೆ ಹೋಗಿ ಹಸಿರು ಶಾಲು ಹಾಕಿಕೊಳ್ಳುತ್ತೀರಿ. ಅದೇ ನಮ್ಮ ರಾಜ್ಯದಲ್ಲಿ ಕೇಸರಿ ಶಾಲು ಧರಿಸಿ ಜನರನ್ನು ವಂಚಿಸುತ್ತಿದ್ದೀರಿ ನೀವು ಗೋಸುಂಬೆ ತರಹ ಬಣ್ಣ ಬದಲಿಸಿ ರಾಜಕೀಯ ಮಾಡುತ್ತಿದ್ದೀರಿ ಎಂದು ಸಚಿನ್ ಮೀಗಾ ಟೀಕಿಸಿದ್ದಾರೆ.
ಈ ಹಿಂದೆ ಚಿಕ್ಕಮಗಳೂರು ಜನರಿಗೆ ಕೇಸರಿ ಶಾಲು ತೋರಿಸಿ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಗೆಲುವು ಸಾಧಿಸಿದ್ದೀರಿ. ರೈತರ ಬಗ್ಗೆ ನಿಜವಾದ ಕಾಳಜಿ ಇದ್ದಲ್ಲಿ ನಮ್ಮ ಭಾಗದಲ್ಲೂ ಹಸಿರು ಶಾಲು ಧರಿಸಿ ರೈತರಿಗೆ ನ್ಯಾಯ ಕೊಡಿಸಿ ಎಂದರು.
ನಮ್ಮ ಜಿಲ್ಲೆಯಲ್ಲಿ ಮಳೆಯಿಂದಾಗಿ ಹಲವಾರು ಜನ ಮನೆ ಕಳೆದುಕೊಂಡಿದ್ದಾರೆ. ನೀವು ಹಸಿರು ಶಾಲು ಧರಿಸಿದ್ದಕ್ಕೆ ನಮಗೆ ಸಂತಸವಾಗುತ್ತಿದೆ. ಆದರೆ ಪ್ರಾಮಾಣಿಕ ಪ್ರಯತ್ನ ಮಾಡಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಕೊಡಿಸಿ ಎಂದು ಸಚಿನ್ ಮೀಗಾ ಆಗ್ರಹಿಸಿದ್ದಾರೆ.


0 Comments