ಶಿವಮೊಗ್ಗ: ಕೆಎಸ್ಸಾರ್ಟಿಸಿ ಬಸ್ಸೊಂದು ಕೆರೆಗೆ ಉರುಳಿದ ಘಟನೆ ಇಂದು ಉಳ್ಳೂರು ಕ್ರಾಸ್ ಬಳಿ ನಡೆದಿದೆ.
ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತು. ಈ ವೇಳೆಗೆ ಸರಿಯಾಗಿ ಬೈಕ್ ಸವಾರನೊಬ್ಬ ಬಸ್ ಗೆ ಸಮೀಪಿಸಿದ, ಮುಂದಾಗುವ ಅನಾಹುತವನ್ನು ತಪ್ಪಿಸುವ ಸಲುವಾಗಿ ಚಾಲಕ ತನ್ನ ನಿಯಂತ್ರಣವನ್ನು ವ್ಯತ್ಯಯ ಗೊಳಿಸಿ ತಪ್ಪಿಸಲು ಹೋಗಿದ್ದಾರೆ. ಈ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಕೆರೆಗೆ ಬಸ್ ಪಲ್ಟಿಯಾಗಿದೆ.
ಬಸ್ಸಿನಲ್ಲಿ ಇದ್ದ 27 ಜನರನ್ನು ರಕ್ಷಣೆ ಮಾಡಲಾಗಿದೆ.ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಬೈಕ್ ನಲ್ಲಿದ್ದ ದೀಪಕ್ ಮತ್ತು ಪ್ರಜ್ವಲ್ ಗಂಭೀರವಾಗಿ ಗಾಯ ಗೊಂಡಿದ್ದಾರೆ. ಇಬ್ಬರನ್ನು ಸಹ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಗಂಭೀರ ಗಾಯವಾಗಿದ್ದರಿಂದ ಒಬ್ಬ ಸವಾರ ಸಾವನ್ನಪ್ಪಿದ್ದಾನೆ.
ಘಟನೆಯ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





0 Comments