ಶೃಂಗೇರಿ ತಾಲೂಕಿನಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ನದಿಯ ನೀರಿನ ಮಟ್ಟ ಏರಿಕೆ ಕಂಡಿದೆ. ಇದಲ್ಲದೇ ಹಳ್ಳ ಕೊಳ್ಳ ಗಳೂ ಬಹುತೇಕ ಉಕ್ಕಿ ಹರಿಯುತ್ತಿದ್ದು, ಹಳ್ಳಿ ಪ್ರದೇಶದ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. 

SSLC ವಿದ್ಯಾರ್ಥಿಗಳ ಕೊನೆಯ ಪರೀಕ್ಷಾ ದಿನವಾದ ಇಂದು, ಭಾರೀ ಮಳೆಗೆ ಶೃಂಗೇರಿಯ ಕಿಕ್ರೆ ಸಮೀಪದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ, ಹೀಗಿರುವಾಗ ಪರೀಕ್ಷಾರ್ಥಿಗಳು ಯಾವುದೇ ರೀತಿಯ  ತೊಂದರೆ ಗೆ ಒಳಗಾಗದಂತೆ ಸುರಕ್ಷಿತವಾಗಿರಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಾಘವೇಂದ್ರ ಅವರು ತೊಂದರೆಗೊಳಗಾದ ಕಿಕ್ರೆ ಭಾಗದ ವಿದ್ಯಾರ್ಥಿಗಳ ಮಾಹಿತಿ ಪಡೆದು, ಸ್ವತಃ ಅವರೇ  ಆ ಜಾಗಕ್ಕೆ ತೆರಳಿ ವಿದ್ಯಾರ್ಥಿ ಮುರಳಿಧರ ನನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದು ಈಗ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

ಅತಿಯಾದ ಮಳೆ ಇದ್ದರೂ ಕೂಡ ಪರೀಕ್ಷೆಗೆ ನೋಂದಣಿ ಮಾಡಿಕೊಂಡ ಎಲ್ಲಾ  493 ವಿದ್ಯಾರ್ಥಿಗಳೂ ಹಾಜರಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಪರೀಕ್ಷಾ ನಂತರ ಪುನಃ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಮ್ಮ ತಮ್ಮ ಮನೆಗಳಿಗೆ ತೆರಳಲು, ಬೇಕಾಗುವ ಎಲ್ಲಾ ವ್ಯವಸ್ಥೆಗಳನ್ನು  ಕಲ್ಪಿಸಲಾಗುವುದು, ಮತ್ತು ಇದಕ್ಕೆ ಪೂರಕವಾದ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ ಕಿಕ್ರೆ ಸೇತುವೆಯ ಸಮೀಪ  ರವಿಕುಮಾರ್ ಎಂಬ ಶಿಕ್ಷಕರನ್ನು ನೇಮಕ ಮಾಡಿದ್ದೇವೆ, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ  ಸುರಕ್ಷಿತವಾಗಿ ಮನೆಗೆ ತೆರಳುವಂತೆ ಅವರು ನೋಡಿಕೊಳ್ಳುತ್ತಾರೆ ಎಂಬ ಮಾಹಿತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಾಘವೇಂದ್ರ ಅವರು ತಿಳಿಸಿದ್ದಾರೆ.