ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣಿ ಗ್ರಾಮದಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಕ್ರೀಟ್ ನ ಮಿಕ್ಸರ್ ಲಾರಿಯು ನಿಂತಿದ್ದ ಜಾಗದ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿರುವ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಚೇರಂಬಾಣಿ ಗ್ರಾಮದ ಸಿದ್ಧಾರೂಢ ಮಠದ ತಡೆಗೋಡೆಯ ಕೆಲಸವು ಪ್ರಗತಿಯಲ್ಲಿದ್ದು ಈ ಕೆಲಸವನ್ನು ಮಾಡುತ್ತಿದ್ದ ವೇಳೆಯಲ್ಲಿ ಏಕಾಏಕಿ ಮಣ್ಣು ಕುಸಿದ ಕಾರಣ ಈ ದುರ್ಘಟನೆ ಸಂಭವಿಸಿದೆ. ಹುಬ್ಬಳ್ಳಿ ಮೂಲದ ನಿವಾಸಿಗಳಾದ ಸಂತೋಷ್ ಹಾಗೂ ಪ್ರವೀಣ್ ಇವರಿಬ್ಬರು ಮಣ್ಣಿನ ಅಡಿಯಲ್ಲಿ ಸಿಲುಕಿದ್ದಾರೆ.
ಕಾಂಕ್ರೀಟ್ ಮಿಕ್ಸರ್ ನ ಲಾರಿಯ ಮೂಲಕ ತಡೆಗೋಡೆಗೆ ಕಾಂಕ್ರೀಟ್ ಸುರಿಯಲಾಗುತ್ತಿತ್ತು, ಈ ಸಂದರ್ಭದಲ್ಲಿ ಹಠಾತ್ತನೆ ಸುಮಾರು ಇಪ್ಪತ್ತು ಅಡಿಗಳಷ್ಟು ಎತ್ತರದಿಂದ ಲಾರಿ ಸಮೇತ ಮಣ್ಣು ಕುಸಿದಿದೆ, ಈ ಪರಿಣಾಮ ಅಲ್ಲೇ ಹತ್ತಿರದಲ್ಲಿ ಕೆಲಸ ಮಾಡುತ್ತಿದ್ದ ಏಳು ಜನರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದರು ಅವರಲ್ಲಿ ಐವರನ್ನು ರಕ್ಷಣೆ ಮಾಡಲಾಗಿದೆ. ಉಳಿದ ಇಬ್ಬರಿಗಾಗಿ ಶೋಧ ಕಾರ್ಯಾಚರಣೆ ನಿನ್ನೆ ರಾತ್ರಿಯಿಂದಲೇ ಆರಂಭವಾಗಿದ್ದು, ಅತಿಯಾಗಿ ಮಳೆಯಾಗುತ್ತಿರುವ ಕಾರಣ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ.
ಈ ಸಂಬಂಧವಾಗಿ ಪ್ರಕರಣವನ್ನು ದಾಖಲಿಸಿಕೊಂಡಿರುವ ಭಾಗಮಂಡಲ ಪೊಲೀಸರು, ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.




0 Comments