ಚಿಕ್ಕಮಗಳೂರು : ಶೃಂಗೇರಿ, ಮೂಡಿಗೆರೆ, ಕಳಸ, ಕೊಪ್ಪ, ಎನ್.ಆರ್ ಪುರ ತಾಲೂಕಿನಲ್ಲಿ ನೆನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ.

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ದತ್ತಪೀಠ

ಮೂಡಿಗೆರೆಯ ದೇವರಮನೆ, ಎತ್ತಿನಭುಜ, ಚಾರ್ಮಾಡಿ ಘಾಟ್

ಶೃಂಗೇರಿಯ ಕಿಗ್ಗಾ, ಕೆರೆಕಟ್ಟೆ

ಕೊಪ್ಪದ ನಾರ್ವೆ, ಹರಿಹರಪುರ

ತೀರ್ಥಹಳ್ಳಿಯ ಕುಂದಾದ್ರಿ ಸೇರಿದಂತೆ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ.


ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ ಇನ್ನೂ ಎರಡು ದಿನಗಳ ಕಾಲ ಹೀಗೆಯೇ ಮಳೆ ಸುರಿಯುವ ಸಾಧ್ಯತೆ ಇದೆ.