ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಸ್ವಿಫ್ಟ್ ಕಾರ್ ಒಂದು ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಚಿಕ್ಕಮಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.
ಕಾರು ಮಂಗಳೂರಿನಿಂದ ಕಳಸಕ್ಕೆ ಬರುವಾಗ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಕಾರಿನ ಮುಂದಿನ ಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಚಾರ್ಮಾಡಿ ಘಾಟಿಯಲ್ಲಿ ಸಾಧಾರಣವಾಗಿ ಮಂಜು ಮುಸುಕಿದ ವಾತಾವರಣವಿದ್ದು, ಹೆಚ್ಚು ಕಡಿದಾದ ತಿರುವುಗಳಿವೆ. ಸ್ವಲ್ಪ ಜಾಗರೂಕತೆ ತಪ್ಪಿದರೂ ಸಹ ಅಪಾರ ಕಟ್ಟಿಟ್ಟ ಬುತ್ತಿ.
ವಾಹನ ಚಾಲಕರು ಆದಷ್ಟು ಜಾಗರೂಕತೆಯಿಂದ ವಾಹನ ಚಲಾಯಿಸಬೇಕು.
- ವರದಿ ತನು ಕೊಟ್ಟಿಗೆಹಾರ.


0 Comments