ಶೃಂಗೇರಿಯ ಧನ್ವಂತರಿ ಆಸ್ಪತ್ರೆಗೆ ಸೇರಿದ, ಆಸ್ಪತ್ರೆಯ ಆವರಣದಿಂದ ಹೊರಗಿರುವ ಸಿಬ್ಬಂಧಿಗಳ ವಸತಿ ಗೃಹದಲ್ಲಿ ರಾತ್ರಿ 1.30ರ ಸಮಯ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಅನಾಹುತಕ್ಕೆ ವಸ್ತುಗಳು ಹಾನಿಯಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅನಾಹುತ ಸಂಭವಿಸಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಪೊಲೀಸರು ಸಹ ಸ್ಥಳಕ್ಕೆ ಭೇಟಿ ನೀಡಿದರು.






ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ :https://forms.gle/hJoKNWwWAXZRZiZF6