ಮಲೆನಾಡಿನ ಭಾಗದಲ್ಲಿ ನಾಳೆಯಿಂದ ರೆಡ್ ಅಲರ್ಡ್ ಘೋಷಣೆ.
ಮಲೆನಾಡು: ಮುಂಗಾರು ಆಗಮನದೊಂದಿಗೆ ರೈತರ ಕೃಷಿ ಚಟುವಟಿಕೆಗಳಿಗೆ ಚಾಲನೆ ಸಿಕ್ಕಿತ್ತು.
ನಿರಂತರ ಸುರಿದ ಮಳೆ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿತ್ತು, ನೆನ್ನೆಯ ದಿನ ಕೆಲವು ಭಾಗಗಳಲ್ಲಿ ಮಳೆಯಾಗಿತ್ತು.ಈಗ ನಾಳೆಯಿಂದ ರೆಡ್ ಅಲರ್ಟ್ ಘೋಷಣೆ ಆಗಿರುವುದರಿಂದ ರೈತರು ಮುನ್ನೆಚ್ಚರಿಕೆ ವಹಿಸುವ ಅಗತ್ಯತೆಯಿದೆ.
ಹಲವು ಜಿಲ್ಲೆಗಳಲ್ಲಿ ನಾಳೆಯಿಂದ 13ನೇ ತಾರೀಖಿನವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ನಾಳೆಯಿಂದ 13ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.




0 Comments