ನಡು ರಸ್ತೆಯಲ್ಲಿ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು.
ಮೂಡಿಗೆರೆ ಇಂದ ಚಿಕ್ಕಮಗಳೂರು ಮಾರ್ಗವಾಗಿ ಚಲಿಸುತ್ತಿದ್ದ ಮಾರುತಿ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.
ವಸ್ತಾರೆ ಗ್ರಾಮದ ಸೇತುವೆ ಮೇಲೆ ಚಲಿಸುತ್ತಿದ್ದ ಮಾರುತಿ 800 ಕಾರಿಗೆ ದಿಢೀರನೆ ಬೆಂಕಿ ಹೊತ್ತಿಕೊಂಡು ಉರಿಯುತ್ತಿದ್ದು. ಸ್ಥಳಕ್ಕೆ ಸ್ಥಳೀಯ ಪೊಲೀಸರು ಹೋಗಿ ಬೆಂಕಿ ನಂದಿಸಲು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.
ಕಾರಿನಲ್ಲಿ ಎರಡು ಜನ ಪ್ರಯಾಣಿಸುತ್ತಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ. ಇಬ್ಬರ ಪೈಕಿ ಓರ್ವ ಪ್ರಯಾಣಿಕ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಸಾವನ್ನಪ್ಪಿನ ಚಾಲಕ ಅರೆನೂರು ವಾಸಿ ರಘು ಎಂದು ತಿಳಿದುಬಂದಿದೆ. ವೃತ್ತಿಯಲ್ಲಿ ರಘು ಟಿಂಬರ್ ವ್ಯಾಪಾರಿಯಾಗಿದ್ದರು.




0 Comments