ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಆಗುತ್ತಿರುವ ಅವಾಂತರ ಒಂದೆಡೆಯಾದರೆ ವಾಹನಗಳ ಅಪಘಾತಗಳು ಸಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.

ಇಂದು ಉಡುಪಿಯಿಂದ ಬೆಂಗಳೂರಿನ ಕಡೆಗೆ ಚಲಿಸುತ್ತಿದ್ದ ಕಾರೊಂದು ಮೂಡಿಗೆರೆಯ ಮುದ್ರೆಮನೆ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.ಪತಿ ಇಕ್ಬಾಲ್ (57), ಪತ್ನಿ ದಿಲ್ಯಾದ್ ಬಾನು (55) ಮತ್ತು ಇಬ್ಬರು ಹೆಣ್ಣು ಮಕ್ಕಳಾದ ಅಬ್ ಸಿಯಾನ್ (24) ಹಾಗೂ ಅಪ್ರ ( 23) ರೊಂದಿಗೆ ಚಲಿಸುತ್ತಿದ್ದಾಗ ಈ ಘಟನೆ ನಡೆದಿದೆ.
ಇವರಿಗೆ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಗೆ ರವಾನಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.




0 Comments