ಮಲೆನಾಡಿನ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವುದರಿಂದ ಅಲ್ಲಲ್ಲಿ ಅವಘಡಗಳು ಸಂಭವಿಸುತ್ತಲೇ ಇವೆ.ಕಳೆದ ವರ್ಷ ಅತಿವೃಷ್ಟಿ ಯಿಂದ ಅಪಾರ ಪ್ರಮಾಣದ ಹಾನಿಯುಂಟಾಗಿತ್ತು.
ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮಲೆನಾಡಿಗರು ಮತ್ತೆ ಸಂಕಷ್ಟಕ್ಕೀಡಾಗಿದ್ದಾರೆ.
ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬೊಮ್ಮನಗದ್ದೆ ನಿವಾಸಿ ಫೆಲಿಕ್ಸ್ ಎಂಬುವವರ ಮನೆಯ ಮೇಲೆ ಮರಬಿದ್ದು ಮನೆಗೆ ಸಾಕಷ್ಟು ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಕುಟುಂಬಸ್ಥರು ಯಾರಿಗೂ ತೊಂದರೆ ಆಗದೆ ಎಲ್ಲರೂ ಸುರಕ್ಷಿತವಾಗಿದ್ದಾರೆ.
ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮನೆಗೆ ಉಂಟಾದ ಹಾನಿಯನ್ನು ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದ ಸದಸ್ಯರು ದುರಸ್ತಿ ಕಾರ್ಯವನ್ನು ನಡೆಸುತ್ತಿದ್ದಾರೆ.




0 Comments