ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಕರ್ನಾಟಕದಾದ್ಯಂತ ಭಾರೀ ಮಳೆಯಾಗುತ್ತಿದೆ. ಸೆಪ್ಟೆಂಬರ್ 15 ರ ವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣಕನ್ನಡ, ಚಿಕ್ಕಮಗಳೂರು,ಹಾಸನ, ಶಿವಮೊಗ್ಗ,ಕೊಡಗು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳು ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರೈತರು ಮತ್ತು ಮೀನುಗಾರರು ಬಹಳ ಎಚ್ಚರಿಕೆ ವಹಿಸಿ ತಮ್ಮ ಕಾರ್ಯಕ್ಷೇತ್ರಗಳಲ್ಲಿ ಕೆಲಸ ಮಾಡಬೇಕೆಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.