ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ರೈತರೊಬ್ಬರು ಬೆಂಬಲ ಬೆಲೆ ಸಿಗದ ಕಾರಣ ತಾವೇ ಬೆಳೆದ ಈರುಳ್ಳಿ ಬೆಳೆಯನ್ನು ಟ್ರಾಕ್ಟರ್ ಚಲಾಯಿಸಿ ನಾಶ ಮಾಡಿದ್ದಾರೆ.
ಅಜ್ಜಂಪುರ ತಾಲೂಕಿನ ಗೊಂಡದಹಳ್ಳಿಯ ರೈತ ದೇವರಾಜ್ ಈರುಳ್ಳಿಗೆ ಸರಿಯಾದ ಬೆಂಬಲ ಬೆಲೆ ಸಿಗದ ಕಾರಣ, ಕಷ್ಟ ಪಟ್ಟು ಎರಡು ಎಕರೆ ಜಾಗದಲ್ಲಿ ಬೆಳೆದಿದ್ದ ಈರುಳ್ಳಿ ಬೆಳೆಯನ್ನು ಟ್ರಾಕ್ಟರ್ ಚಲಾಯಿಸಿ ಸಂಪೂರ್ಣ ನಾಶ ಮಾಡಿದ್ದಾರೆ.
ಈರುಳ್ಳಿ ಬೆಳೆಯಲು ಖರ್ಚು ಮಾಡಿದ ಹಣ ಸಹ ಫಸಲಿನಿಂದ ಕೈಗೆ ದೊರಕುತ್ತಿಲ್ಲ ಎಂದು ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇದಲ್ಲದೇ ಈ ಸಮಾಜದಲ್ಲಿ ರೈತನಿಗೆ ಉತ್ತಮ ಸಹಕಾರ ದೊರೆಯುತ್ತಿಲ್ಲ ಎಂದು ತಮ್ಮ ಅಳಲನ್ನು ವ್ಯಕ್ತ ಪಡಿಸಿದರು. ಸರ್ಕಾರ ಈ ಕೂಡಲೇ ಬೆಂಬಲ ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿದರು.
ತನು ಕೊಟ್ಟಿಗೆಹಾರ, ವರದಿಗಾರರು.



0 Comments