ಹಾಸನ :(ನ್ಯೂಸ್ ಮಲ್ನಾಡ್ ವರದಿ) ನಿತಿಂದ್ದ ರೈಲಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಎರಡಕ್ಕೂ ಹೆಚ್ಚು ಭೋಗಿಗಳು ಹೊತ್ತಿ ಉರಿದ ಘಟನೆ ಅರಸೀಕೆರೆಯಲ್ಲಿ ನಡೆದಿದೆ.

ಅರಸೀಕೆರೆ ರೈಲ್ವೆ ಜಂಕ್ಷನ್ ಸಮೀಪದ ಅಂಚೆಕೊಪ್ಪಲು ಬಳಿ ಈ ಅವಘಡ ಸಂಭವಿಸಿದೆ.

ಬೆಂಗಳೂರಿನಿಂದ ಹಿಂತಿರುಗಿ ಬಂದು ಎರಡು ದಿನ ಜಂಕ್ಷನ್ ನಲ್ಲಿಯೇ ರೈಲು ನಿಂತಿತ್ತು, ರೈಲಿನ ಬ್ಯಾಟರಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಅಗ್ನಿ ಅವಘಡ ಸಂಭವಿಸಿ ಎರಡು ಬೋಗಿಗಳ ಆಸನಗಳು ಸಂಪೂರ್ಣವಾಗಿ ಸುಟ್ಟು ಹೋಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.