ಹಾಸನ : (ನ್ಯೂಸ್ ಮಲ್ನಾಡ್ ವರದಿ) ಡೀಸೆಲ್ ಟ್ಯಾಂಕರ್ ಮತ್ತು ಬೊಲೆರೋ ವಾಹನದ ನಡುವೆ ಡಿಕ್ಕಿಯಾದ ಪರಿಣಾಮ ನೂರಾರು ಕೋಳಿಗಳು ಸಾವನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಹೊರವಲಯದ ರಾಷ್ಟೀಯ ಹೆದ್ದಾರಿ 75 ರಲ್ಲಿ ಈ ದುರ್ಘಟನೆ ನಡೆದಿದೆ. ಡೀಸೆಲ್ ಟ್ಯಾಂಕರ್ ವಾಹನವು ಕೋಳಿಗಳನ್ನು ತುಂಬಿಕೊಂಡು ಸಾಗುತ್ತಿದ್ದ ಬೊಲೆರೋ ವಾಹನಕ್ಕೆ ಡಿಕ್ಕಿಹೊಡೆದ ಪರಿಣಾಮ ವಾಹನದಲ್ಲಿದ್ದ ನೂರಾರು ಕೋಳಿಗಳು ಸಾವನಪ್ಪಿದೆ ಎಂದು ತಿಳಿದುಬಂದಿದೆ.
ಡೀಸೆಲ್ ಟ್ಯಾಂಕರ್ ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ರೈಲ್ವೆ ತಡೆಗೋಡೆಗೂ ಡಿಕ್ಕಿ ಹೊಡೆದಿದೆ, ಈ ಘಟನೆಯಿಂದ ಹೆದ್ದಾರಿಯಲ್ಲಿ ಕೆಲವು ಸಮಯಗಳ ಕಾಲ ವಾಹನ ಸಂಚಾರ ಕೂಡ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



0 Comments