ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮಗುಚಿ ಬಿದ್ದ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರ ಕಾರೆಂದು ತಿಳಿದುಬಂದಿದೆ. ಆಯಕಟ್ಟಿನ ರಸ್ತೆ ಯಾದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದೆ. ಮೂಡಿಗೆರೆಯ ಬಿದರಹಳ್ಳಿ ನೀರಗಂಡಿ ಸಮೀಪ ಈ ಘಟನೆ ನಡೆದಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಪಾಯವಿಲ್ಲದೆ ಸುರಕ್ಷಿತವಾಗಿದ್ದಾರೆ.
ಮಗುಚಿದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ತನು ಕೊಟ್ಟಿಗೆಹಾರ, ವರದಿಗಾರರು.



0 Comments