ಶಿವಮೊಗ್ಗ : ಈ ಹಿಂದೆ ಶಿವಮೊಗ್ಗದಲ್ಲಿ ಬೀದಿನಾಯಿಗಳ ಮಾರಣ ಹೋಮ ನಡೆದಿತ್ತು ಈ ಸಂಬಂಧ ದೂರು ಸಹ ದಾಖಲಾಗಿತ್ತು.
ಆ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ್ದ ಪೊಲೀಸರು, ಒಂಬತ್ತು ಜನರನ್ನು ಬಂಧಿಸಿದ್ದಾರೆ. ಇದರಲ್ಲಿ ಗ್ರಾಮ ಪಂಚಾಯತ್ ನ ಕಾರ್ಯದರ್ಶಿಯೂ ಸಹ ಬಂಧಿತರಾಗಿದ್ದಾರೆ.
ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಾಯಿಗಳ ಕಾಟ ವಿಪರೀತವಾಗಿತ್ತು, ಈ ಹಿನ್ನೆಲೆಯಲ್ಲಿ ನಾಯಿಗಳನ್ನು ಹಿಡಿದು ಬೇರೆಡೆ ಬಿಡಲು ಟೆಂಡರ್ ಕರೆಯಲಾಗಿತ್ತು, ಈ ಟೆಂಡರ್ ಅನ್ನು ಪಡೆದ ಮೈಸೂರು ಮೂಲದ ವ್ಯಕ್ತಿಗಳು ನಾಯಿಗಳನ್ನು ಜೀವಂತವಾಗಿ ಗುಂಡಿ ತೋಡಿ ಹೂತಿಟ್ಟಿದ್ದರು, ಇದನ್ನು ಗಮನಿಸಿದ ಸ್ಥಳೀಯರು ಪ್ರಾಣಿದಯಾ ಸಂಘದ ಸದಸ್ಯರಿಗೆ ಮಾಹಿತಿ ನೀಡಿದ್ದರು. ಪ್ರಾಣಿದಯಾ ಸಂಘದ ಸದಸ್ಯರು ಬಂದು ಸ್ಥಳ ಪರಿಶೀಲನೆ ಮಾಡಿದಾಗ ನಾಯಿಗಳನ್ನು ಹೂತಿಟ್ಟಿರುವುದು ಕಂಡು ಬಂದಿತ್ತು. ನಂತರದಲ್ಲಿ ಪಶುಪಾಲನಾ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಕುರಿತು ಸಂಪೂರ್ಣ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.


0 Comments