ಬೆಂಗಳೂರು :(ನ್ಯೂಸ್ ಮಲ್ನಾಡ್ ವರದಿ)ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಸಚಿವರಾದ ಡಿ.ಎನ್ ಜೀವರಾಜ್ ಮರು ನೇಮಕಗೊಂಡಿದ್ದಾರೆ.
ಕರ್ನಾಟಕ ರಾಜ್ಯದ ಈ ಹಿಂದಿನ ಮುಖ್ಯಮಂತ್ರಿಗಳಾಗಿದ್ದ ಬಿಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರದಲ್ಲಿಯೂ ಸಹ ಡಿಎನ್ ಜೀವರಾಜ್ ಅವರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದರು.
ಪ್ರಸ್ತುತ ಬಸವರಾಜ ಬೊಮ್ಮಾಯಿ ಅವರ ಸರ್ಕಾರದಲ್ಲಿಯೂ ಸಹ ಡಿ.ಎನ್ ಜೀವರಾಜ್ ಅವರು ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದು, ಶೃಂಗೇರಿ ಕ್ಷೇತ್ರದ ಮುಂದಿನ ರಾಜಕೀಯ ಚಟುವಟಿಕೆಗಳಲ್ಲಿ ಬಹಳಷ್ಟು ಪರಿಣಾಮ ಬೀರಬಹುದು.



0 Comments