ಹಾಸನ : ಪ್ರಧಾನಿಯಾಗಿ ನರೇಂದ್ರ ಮೋದಿಯವರು ಆಯ್ಕೆಯಾದ ನಂತರದ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಲೇ ಇದೆ ಎಂದು ಆರೋಪಿಸಿ ಇಂದು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಇಂದು ಹಾಸನದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ಮಾಡಿದ ಜೆಡಿಎಸ್ ನ ಕಾರ್ಯಕರ್ತರು ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಕೂಗಿದರು. ಈ ವೇಳೆ ಹಲವೆಡೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು.
ಜೆಡಿಎಸ್ ಮುಖಂಡ ಅಗಿಲೆ ಯೋಗೇಶ್ ನೇತೃತ್ವದಲ್ಲಿ ಐನೂರಕ್ಕೂ ಹೆಚ್ಚಿನ ಸೈಕಲ್ ಗಳಲ್ಲಿ ರ್ಯಾಲಿ ನಡೆಯಿತು. ಬಿಜೆಪಿ ಸರ್ಕಾರ ಇರುವವರೆಗೆ ಸಾಮಾನ್ಯರಿಗೆ ಜೀವನ ನಡೆಸುವುದು ಬಹಳ ಕಷ್ಟವಾಗಿದೆ, ಈ ಕೂಡಲೇ ಪೆಟ್ರೋಲ್, ಡೀಸೆಲ್, ಗ್ಯಾಸ್ ನ ದರವನ್ನು ಕಡಿಮೆ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಿದರು. ಬಡವರ ಕಗ್ಗೊಲೆಯನ್ನು ಮಾಡದೆ, ಬೆಲೆ ಏರಿಕೆಯನ್ನು ಈ ಕೂಡಲೇ ಸರ್ಕಾರ ನಿಯಂತ್ರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.



0 Comments