ಶಿವಮೊಗ್ಗ : ಶಿವಮೊಗ್ಗದ ಚೋರಡಿ ಗ್ರಾಮ ಪಂಚಾಯತ್ ಆವರಣದಲ್ಲಿ ವ್ಯಕ್ತಿಯೊಬ್ಬ ವಾಮಾಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ, ವಾಮಾಚಾರದ ಸಂಪೂರ್ಣ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಚೋರಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಗ್ರಾಮ ಪಂಚಾಯತ್ ಸದಸ್ಯರ ಮನೆಯ ಮುಂದೆ ಕೂಡ ವಾಮಾಚಾರ ನಡೆದಿದೆ. ವಾಮಾಚಾರ ನಡೆಸಿದ ವ್ಯಕ್ತಿಯನ್ನು ಮಹೇಶ್ ಎಂದು ಗುರುತಿಸಲಾಗಿದೆ.
ಮಹೇಶನು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಳಪಡುವ ಜಮೀನಿನಲ್ಲಿ ಮನೆ ಕಟ್ಟಲು ಮುಂದಾಗಿದ್ದ. ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು ಮನೆಕಟ್ಟಲು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು, ಈ ಹಿನ್ನೆಲೆಯಲ್ಲಿ ಮಹೇಶನು ವಾಮಾಚಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಕುಂಸಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಸಂಬಂಧ ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ, ಸತ್ಯಾಸತ್ಯತೆಗಳು ಇನ್ನಷ್ಟೇ ಹೊರಬೀಳಲಿದೆ.




0 Comments