ಚಿಕ್ಕಮಗಳೂರು : ( ನ್ಯೂಸ್ ಮಲ್ನಾಡ್ ವರದಿ ) ಗುಲಾಬ್ ಚಂಡಮಾರುತದಿಂದ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ವಿಪರೀತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಈ ಬಾರಿ ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ.27 ಕ್ಕೂ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ತಿಳಿಸಿದ್ದಾರೆ.

ಗುಲಾಬ್ ಚಂಡಮಾರುತದಿಂದ  ಮಲೆನಾಡು, ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಸೂಚನೆಯನ್ನು ನೀಡಿದ್ದಾರೆ. ಮೀನುಗಾರರು ಹಾಗೂ ರೈತರು ತಮ್ಮ ಕೆಲಸಗಳಿಗೆ ತೆರಳುವ ಮೊದಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಹಾಸನ, ತುಮಕೂರು, ಕೋಲಾರ, ಕೊಡಗು, ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.