ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬಾಬಾ ಬುಡನ್ ಗಿರಿಯಲ್ಲಿ ದತ್ತ ಪಾದುಕೆಗಳಿಗೆ ಪೂಜೆಯನ್ನು ಸಲ್ಲಿಸಲು ಅವಕಾಶವನ್ನು ನೀಡದ ಪೋಲೀಸರ ವಿರುದ್ಧ ಶ್ರೀರಾಮ ಸೇನೆಯ ಮುಖಂಡರು ಧರಣಿಯನ್ನು ನಡೆಸಿದ ಘಟನೆ ಬಾಬಾಬುಡನ್ ಗಿರಿಯಲ್ಲಿ ನಡೆದಿದೆ.
ಗುರುವಾರ ಶ್ರೀರಾಮ ಸೇನೆಯ ಮುಖಂಡರು ಕಾಳಿಸ್ವಾಮಿಯ ನೇತೃತ್ವದಲ್ಲಿ ಬಾಬಾಬುಡನ್ ಗಿರಿಯಲ್ಲಿ ದತ್ತ ಪಾದುಕೆಗಳಿಗೆ ಪೂಜೆಯನ್ನು ಸಲ್ಲಿಸಲು ಮುಂದಾಗಿದ್ದು ಪೊಲೀಸರು ಪೂಜೆಯನ್ನು ನೆರವೇರಿಸಲು ಅವಕಾಶವನ್ನು ನೀಡದೆ ಇದ್ದರಿಂದ ಕೆಲಹೊತ್ತು ಪ್ರತಿಭಟನೆಯನ್ನು ನಡೆಸಿದರು.
ದತ್ತಪೀಠದ ವಿವಾದದಲ್ಲಿ ಹೈಕೋರ್ಟ್ ಹಿಂದಿನ ಸರ್ಕಾರದ ಆದೇಶವನ್ನು ರದ್ದು ಪಡಿಸಿದ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆಯ ಮುಖಂಡರಾದ ಗಂಗಾಧರ ಕುಲಕರ್ಣಿ, ಜಿಲ್ಲಾಧ್ಯಕ್ಷ ರಂಜಿತ್‌ಶೆಟ್ಟಿ ಮತ್ತಿತರು ಕಾಳಿಸ್ವಾಮಿಯ ನೇತೃತ್ವದಲ್ಲಿ ದತ್ತಪಾದುಕೆಗೆ ಪೂಜೆ ಸಲ್ಲಿಸಲು ಮುಂದಾದಾಗ ಸ್ಥಳದಲ್ಲಿದ್ದ ಪೊಲೀಸರು ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಪೂಜೆಗೆ ಅವಕಾಶವನ್ನು ನೀಡಲಿಲ್ಲ ಅಲ್ಲದೆ ಗುಹೆಯೊಳಗೆ ಪ್ರವೇಶವನ್ನು ನಿಷೇಧಿಸಿದರು, ಇದರಿಂದ ಆಕ್ರೋಶಗೊಂಡ ಮುಖಂಡರು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಮಾತಿನ ಚಕಮಕಿಯನ್ನು ನಡೆಸಿ ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಿದರು.
ನಂತರ ಸ್ಥಳಕ್ಕೆ ಆಗಮಿಸಿದ ಚಿಕ್ಕಮಗಳೂರು ಕಂದಾಯ ಉಪ ವಿಭಾಗಾಧಿಕಾರಿ ಡಾ. ಎಚ್. ಎಲ್. ನಾಗರಾಜ್ ಮುಖಂಡರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಯಶಸ್ವಿಯಾದರು




0 Comments