ಚಿಕ್ಕಮಗಳೂರು : ಬಿಜೆಪಿ ಪಕ್ಷವು ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಹಾಗೂ ಬಿ.ಎಸ್ ಯಡಿೂರಪ್ಪನವರ ಮಾರ್ಗದರ್ಶನದಲ್ಲಿ ಮುಂದಿನ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದರು.
ರಾಜ್ಯದಲ್ಲಿ ಬಿಜೆಪಿ ಪರವಾದ ಸ್ಪಷ್ಟ ಅಭಿಮತ ಜನರಲ್ಲಿದೆ. ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಪಕ್ಷವು ಜಯ ಸಾಧಿಸಿ ಅತೀ ದೊಡ್ಡ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಲಿದೆ ಎಂದರು.
ತನು ಕೊಟ್ಟಿಗೆಹಾರ, ವರದಿಗಾರರು.


0 Comments