ಸುಪ್ರೀಂ ಕೋರ್ಟ್ ನ ಆದೇಶದ ಹೆಸರಿನಲ್ಲಿ ಮೈಸೂರಿನ ಹುಚ್ಚಗಣಿ ಮಹದೇವಮ್ಮ ದೇವಾಲಯವನ್ನು ಧ್ವಂಸಗೊಳಿಸಿದ ಹಿನ್ನೆಲೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹಲವೆಡೆ ಪ್ರತಿಭಟನೆಗಳು ಸಹ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಹೊತ್ತು ಗೊತ್ತು ಇಲ್ಲದೇ ತುಘಲಕ್ ರೀತಿಯಲ್ಲಿ  ದೇವಸ್ಥಾನಗಳನ್ನು ಒಡೆಯುತ್ತಿರುವುದನ್ನು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ, ಕಳೆದ ಎರಡು ಮೂರು ವರ್ಷಗಳಿಂದ ಕಾನೂನಿನ ಹೆಸರಲ್ಲಿ ಹಲವಾರು ದೇವಾಲಯಗಳನ್ನು ನಾಶ ಮಾಡುತ್ತಿದ್ದಾರೆ ಇದು ಸರಿಯಲ್ಲ, ಹಿಂದೂ ಸಮಾಜ ಈ ಘಟನೆಯನ್ನು ತೀವ್ರವಾಗಿ ವಿರೋಧ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪ್ರತಿಯೊಂದು ಪ್ರಕರಣದಲ್ಲಿಯೂ ಪ್ರತ್ಯೇಕವಾಗಿ ಜಿಲ್ಲಾ ಸಮಿತಿ ದೇವಸ್ಥಾನ ಆಡಳಿತ ಮಂಡಳಿ ಪ್ರತಿನಿಧಿಗಳೊಂದಿಗೆ  ಚರ್ಚಿಸಿ ಆ ದೇವಸ್ಥಾನದ ಇತಿಹಾಸ, ಸ್ಥಳ ಮುಂತಾದ ಸೂಕ್ಷ್ಮ ವಿಚಾರಗಳನ್ನು ತಿಳಿದುಕೊಂಡು ನಂತರ ಮುಂದಿನ ನಿರ್ಣಯಗಳನ್ನು ತೆಗೆದುಕೊಳ್ಳಬೇಕು ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಯೋಗೀಶ್ ರಾಜ್ ಅರಸು, ಸದಾಶಿವ, ರಂಗನಾಥ್,ಶ್ಯಾಮ್ ವಿ ಗೌಡ, ಅಮಿತ್, ಇನ್ನಿತರರು ಇದ್ದರು.