ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಮೂಡಿಗೆರೆಯ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿಯ ಯುವಕನಿಗೆ ಮೂತ್ರವನ್ನು ಕುಡಿಸಿದ ಆರೋಪ ಎದುರಿಸುತ್ತಿರುವ ಪಿಎಸ್ಐ ಅರ್ಜುನ್ ಅವರಿಗೆ ನಗರದ ಒಂದನೇ ಹೆಚ್ಚುವರಿ ಸೆಷನ್ಸ್ ಜಾಮೀನು ನೀಡಲು ನಿರಾಕರಿಸಿದೆ ಎಂದು ತಿಳಿದುಬಂದಿದೆ.
ನ್ಯಾಯದೀಶೆ ಬಿ. ಪುಷ್ಪಾಂಜಲಿಯವರು ಅರ್ಜಿಯ ವಿಚಾರಣೆಯನ್ನು ನಡೆಸಿ, ಜಾಮೀನು ನೀಡಲು ನಿರಾಕರಿಸಿದ್ದಾರೆ. ಸೋಮವಾರ ಅರ್ಜುನ್ ರವರ ಜಾಮೀನು ಅರ್ಜಿಯನ್ನು ನಿರಾಕರಿಸಲಾಗಿದೆ. ಕೆಲವು ದಿನಗಳ ಹಿಂದೆ ನೀಡಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸಹ ನ್ಯಾಯಾಲಯವು ಈ ಹಿಂದೆ ತಿರಸ್ಕೃತಗೊಳಿಸಿತ್ತು.




0 Comments