ಚಿಕ್ಕಮಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ಕೂಡಲೇ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ  ಭಾರತ್ ಬಂದ್ ಗೆ ಕರೆ ನೀಡಲಾಗಿದೆ.

ಈ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯನ್ನೂ ಸಂಪೂರ್ಣ ಬಂದ್ ಮಾಡುವಂತೆ ಜಿಲ್ಲಾ ರೈತ ಸಂಘ ಸಭೆ ನಡೆಸಿ ನಿರ್ಧಾರ ಪ್ರಕಟಿಸಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಕರೆ ನೀಡಿರುವ ಭಾರತ್ ಬಂದ್ ಗೆ ಸ್ಪಂದಿಸಲು ನಿರ್ಧರಿಸಿದ್ದೇವೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಬಸವರಾಜ್ ತಿಳಿಸಿದ್ದಾರೆ.

ಸೆಪ್ಟೆಂಬರ್ 27 ರಂದು ಬೆಳಗ್ಗೆ 06 ಗಂಟೆಯಿಂದ ಸಂಜೆ 04 ಗಂಟೆವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವ ಯೋಜನೆ ಮಾಡಿಕೊಳ್ಳಲಾಗಿದೆ ಇದಕ್ಕೆ ಹಲವು ಪಕ್ಷ ಮತ್ತು ಸಂಘಟನೆಗಳ ಬೆಂಬಲವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರು ಹಾಗೂ ರೈತ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.