ದತ್ತಪೀಠ ವಿವಾದ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ, ದತ್ತ ಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ ಹಿಂದೂ ಅರ್ಚಕರ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ. ದತ್ತಪೀಠದ ಪೂಜಾ ಕೈಂಕರ್ಯಗಳಿಗೆ ಮುಜಾವರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ 2018ರ ಮಾ.19ರಂದು  ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಇದುವರೆಗೂ ದತ್ತಜಯಂತಿ ಸಮಯದಲ್ಲಿ ಮಾತ್ರ ಹಿಂದೂ ಅರ್ಚಕರಿಂದ ಪೂಜೆ ನೆರವೇರಿಸಲಾಗುತ್ತಿತ್ತು. ಖಾಯಂ ಹಿಂದೂ ಅರ್ಚಕರ ನೇಮಕಕ್ಕಾಗಿ ಹಿಂದೂ ಪರ ಸಂಘಟನೆಗಳು ಹಲವು ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದವು. ಇದೀಗ ಹೈಕೋರ್ಟ್ ಅರ್ಚಕರ ನೇಮಕಕ್ಕೆ ಅನುಮತಿ ನೀಡಿದ್ದು, ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳಬೇಕಿದೆ.