ಕೊರೋನ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶೃಂಗೇರಿ ಘಟಕದ ವಿದ್ಯಾರ್ಥಿಗಳು ಇಂದು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಶಾಲಾ ಕಾಲೇಜುಗಳು ಆರಂಭವಾದ ನಂತರದ ದಿನಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸರಿಯಾಗಿ ಬಸ್ ನ ವ್ಯವಸ್ಥೆ ಲಭ್ಯವಾಗುತ್ತಿಲ್ಲ, ಈ ಕುರಿತು ಗಮನಹರಿಸಿ ಶೀಘ್ರವಾಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಗಿರುವ ಸಮಸ್ಯೆಯನ್ನು ಪರಿಹರಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಇದಲ್ಲದೇ ಹಲವಾರು ಜನ ಬಡ ವಿದ್ಯಾರ್ಥಿಗಳು ಹಾಸ್ಟೆಲ್ ವ್ಯವಸ್ಥೆಯನ್ನು ನಂಬಿಕೊಂಡು ವಿಧ್ಯಾಭ್ಯಾಸ ನಡೆಸುತ್ತಿದ್ದಾರೆ ಅವರಿಗೆ ಹಾಸ್ಟೆಲ್ ಗಳು ಇನ್ನೂ  ಸಮರ್ಪಕವಾಗಿ ಕಾರ್ಯ ನಿರ್ವಹಿಸಿದ ಕಾರಣ ಹಾಸ್ಟೆಲ್ ವ್ಯವಸ್ಥೆಯನ್ನು ವಿದ್ಯಾರ್ಥಿಗಳಿಗೆ ಅನುಗುಣವಾಗಿ ಆರಂಭಿಸಬೇಕೆಂದು ಒತ್ತಾಯಿಸಿದ್ದಾರೆ ಹಾಗೂ ಶಿಷ್ಯವೇತನವನ್ನು ಸಹ ತಡ ಮಾಡದೆ ಶೀಘ್ರವಾಗಿ ಪಾವತಿಮಾಡಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. 

ಈ ಸಂದರ್ಭದಲ್ಲಿ ಅ.ಭಾ.ವಿ ಪ ನಗರಕಾರ್ಯದರ್ಶಿ ಸುಜಿತ್, ನಾಗಪ್ರಸಾದ್, ಶೃಂಗ, ಆದಿತ್ಯ, ಕಾರ್ತಿಕ್, ಸಂಜಯ್ ಹಾಗೂ ಇನ್ನಿತರ ಕಾರ್ಯಕರ್ತರು ಹಾಜರಿದ್ದರು.