ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಯೂತ್ ಕಾಂಗ್ರೆಸ್ ನ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶನ ಮಾಡಿದ್ದಾರೆ.
ತರೀಕೆರೆ ಪಟ್ಟಣದ ಗಾಂಧಿ ಸರ್ಕಲ್ ನ ಬಳಿ ಶೋಭಾ ಕರಂದ್ಲಾಜೆ ಪ್ರಯಾಣಿಸುತ್ತಿದ್ದ ಕಾರನ್ನು ತಡೆಯುವ ಪ್ರಯತ್ನವನ್ನು ಯೂತ್ ಕಾಂಗ್ರೆಸ್ ನ ಸದಸ್ಯರು ಮಾಡಿದ್ದಾರೆ.
ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ತೈಲ ಬೆಲೆ ಏರಿಕೆ, ಹಾಗೂ ಕೇಂದ್ರ ಸರ್ಕಾರವು ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಪ್ರತಿಭಟಿಸಿದ ಯೂತ್ ಕಾಂಗ್ರೆಸ್ ನ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರವು ಹಿಂದೂಗಳ ದೇವಸ್ಥಾನವನ್ನು ಒಡೆಯುತ್ತಿದೆ ಹಿಂದೂ ವಿರೋಧಿ ಬಿಜೆಪಿ ಸರ್ಕಾರಕ್ಕೆ ದಿಕ್ಕಾರ ಎಂಬ ಘೋಷಣೆಯನ್ನು ಕೂಗುತ್ತಾ, ಶೋಭಾ ಕರಂದ್ಲಾಜೆ ಅವರಿಗೆ ಕಪ್ಪುಪಟ್ಟಿ ಪ್ರದರ್ಶಿಸಿ ಯೂತ್ ಕಾಂಗ್ರೆಸ್ ನ ಸದಸ್ಯರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ತನು ಕೊಟ್ಟಿಗೆಹಾರ, ವರದಿಗಾರರು.



0 Comments